ಜಾದೂ ಕಾರ್ಯಕ್ರಮ

ಶ್ರೀರಾಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಸಂಯೋಜನೆಯೊಂದಿಗೆ ರಾಮಕೃಷ್ಣ ಮಿಶನ್ ಸ್ವಚ್ಛ ಮಂಗಳೂರು ಪ್ರಸ್ತುತಪಡಿಸಿದ “ಸ್ವಚ್ಛತೆಗಾಗಿ ಜಾದೂ” ಕಾರ್ಯಕ್ರಮ ನಡೆಯಿತು.
ಸನ್ಮಾನ್ಯ ಪ್ರಧಾನಮಂತ್ರಿ ಮೋದಿಯವರ ಸ್ವಚ್ಛ ಭಾರತ ಕಲ್ಪನೆಯನ್ನು ರಾಮಕೃಷ್ಣ ಮಿಶನ್ ಬಳಗದವರು ಅಕ್ಷರಶಃ ಜಾರಿಗೆ ತಂದು ಕಾರ್ಯಗತಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕುದ್ರೋಳಿ ಗಣೇಶ್‌ರವರು ಸಮಾಜದ ಹಿತದೃಷ್ಟಿಯಿಂದ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷದಾಯಕ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಇವರು ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ “ಸ್ವಚ್ಛತೆಗಾಗಿ ಜಾದೂ” ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಮಕೃಷ್ಣ ಮಿಶನ್ ಸ್ವಚ್ಛತೆಗಾಗಿ ಜಾದೂ” ಕಾರ್ಯಕ್ರಮ ಮನರಂಜನೆಗೆ ಮಾತ್ರವಲ್ಲ, ಸ್ವಚ್ಛತಾ ಜಾಗೃತಿಯನ್ನು ಮೂಡಿಸುವ ಸದುದ್ದೇಶದೊಂದಿಗೆ 100 ಶಾಲೆಗಳಲ್ಲಿ ಉಚಿತವಾಗಿ, ಕಾರ್ಯಕ್ರಮ ಕೊಡುತ್ತಿದೆ. ಈ ನಿಟ್ಟಿನಲ್ಲಿ ಶ್ರೀರಾಮ ಪ್ರೌಢಶಾಲೆಯಲ್ಲಿ 63ನೇ ಕಾರ್ಯಕ್ರಮ ನೀಡುತ್ತಿರುವುದು ಹರ್ಷದಾಯಕ ಎಂದು ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್‌ರವರು ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದರು. ಜಾದೂ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವುದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ ಎನ್, ಡಾ|| ಕಮಲಾ ಪ್ರಭಾಕರ ಭಟ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ರವಿರಾಜ್, ಪ್ರೌಢಶಾಲಾ ಮುಖ್ಯಶಿಕ್ಷಕರಾದ ವಸಂತಿಕುಮಾರಿ, ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply