ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಕಾರ್ಯಕ್ರಮ

ಶ್ರೀರಾಮ ಪ್ರೌಢಶಾಲೆಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮವು ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂಭವಿ ಮಾತಾಜಿ ಮತ್ತು ಎಲ್ಲಾ ಅಧ್ಯಾಪಕರ ಉಪಸ್ಥಿತಿಯಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಶ್ರೀ ಜಿನ್ನಪ್ಪ ಶ್ರೀಮಾನ್ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧೀಜಿಯವರ ವ್ಯಕ್ತಿತ್ವದ ಆದರ್ಶ ಮೌಲ್ಯಗಳನ್ನು ತಿಳಿಸಿದರು ಶಾಂಭವಿ ಮಾತಾಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಾವು ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಕರೆ ನೀಡಿದರು ಕಾರ್ಯಕ್ರಮವು ಸರಸ್ವತಿ ವಂದನೆಯೊಂದಿಗೆ ಆರಂಭವಾಗಿ ಶಾಂತಿ ಮಂತ್ರದೊಂದಿಗೆ ಕೊನೆಗೊಂಡಿತು ಶ್ರೀ ಗೋಪಾಲ ಶ್ರೀಮನ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಶ್ರೀಮತಿ ಸೌಮ್ಯ ಮಾತಾಜಿ ಧನ್ಯವಾದ ಸಮರ್ಪಿಸಿದರು. ಅಧ್ಯಾಪಕರಿಂದ ಶಾಲಾ ಆವರಣದ ಸ್ವಚ್ಛತೆ ನಡೆಯಿತು

Leave a Reply