ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ದಿನಾಂಕ ೧೪.೦೪.೨೦೧೫ ರಂದು ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವೇದವ್ಯಾಸ ಧ್ಯಾನಮಂಟಪದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ರೂಪಕಲಾ ಮಾತಾಜಿ ಇವರು ಅಂಬೇಡ್ಕರರ ಜೀವನದ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಅಮ್ಟೂರು ಹಿಂದಿನ ಕಾಲದಲ್ಲಿದ್ದ ಅಸ್ಪೃಶ್ಯತೆಯ ಬಗ್ಗೆ ಹಾಗೂ ಪ್ರಸ್ತುತ ದಿನಗಳಲ್ಲಿ ಆದ ಬದಲಾವಣೆಗಳನ್ನು ತಿಳಿಸುತ್ತಾ ಶುಭ ಹಾರೈಸಿದರು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಗಿರಿ ಸತೀಶ್ ಭಟ್ ಹಾಗೂ ಮುಖ್ಯೋಪಾಧ್ಯಾರಾದ ರವಿರಾಜ್ ಕಣಂತೂರ್ ಉಪಸ್ಥಿತರಿದ್ದರು.

Leave a Reply