ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ

ಶ್ರೀರಾಮ ವಿದ್ಯಾಕೇಂದ್ರದ ಕನ್ನಡ ರಾಜ್ಯೋತ್ಸವದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಧ್ವಜಾರೋಹಣ ಮಾಡಿದರು. ಅಸ್ತಿತ್ವ ಪ್ರತಿಷ್ಠಾನ ಇದರ ಪ್ರಧಾನ ಸಂಚಾಲಕರಾದ ಎಸ್.ಎಂ. ಉಡುಪ ಕನ್ನಡ ರಾಜ್ಯೋತ್ಸವದ ನಿಮಿತ್ತ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅಸ್ತಿತ್ವ ಪ್ರತಿಷ್ಠಾನವು ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಹಾಗೂ ಗೀತ ಭಾರತಿ ನಡೆಸಿದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್ ಎನ್. ಎಲ್ಲಾ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಎಲ್ಲರೂ ಜೊತೆಯಾಗಿ ಹಾಡಿದರು. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಲಕ್ಷ್ಮೀಶ ಕಾರ್‍ಯಕ್ರಮವನ್ನು ನಿರ್ವಹಿಸಿದರು.

Leave a Reply