ಪ್ರೌಢಶಾಲಾ ವಿಭಾಗದ ಪೋಷಕರ ಸಭೆ

ದಿನಾಂಕ 05.09.2018
ಸಂಸ್ಕಾರಯುತ ಶಿಕ್ಷಣ ನೀಡುವುದರ ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರೀರಾಮ ಶಿಕ್ಷಣ ಸಂಸ್ಥೆ ರಾಜ್ಯದಲ್ಲೇ ವೈಶಿಷ್ಟ್ಯ ಸ್ಥಾನವನ್ನು ಪಡೆದುಕೊಂಡಿದೆ. ಎಲ್ಲಾ ವರ್ಗದ ಮಕ್ಕಳಿಗೆ ಸಮಾನ ಶಿಕ್ಷಣ ನೀಡುವುದಲ್ಲದೆ, ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಇಂತಹ ಸದುದ್ದೇಶಕ್ಕೆ ಮಕ್ಕಳ ಪೋಷಕರು ಸಂಸ್ಥೆಯೊಂದಿಗೆ ಕೈಜೋಡಿಸಿ ಸಂಸ್ಥೆಯ ಏಳಿಗೆಗಾಗಿ ಪಾತ್ರರಾಗಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಇವರು ಪೋಷಕರನ್ನುದ್ದೇಶಿಸಿ ಮಾತನಾಡಿದರು.
ಇವರು ಶ್ರೀರಾಮ ಪ್ರೌಢಶಾಲಾ ವಿಭಾಗದ ಪೋಷಕರ ಸಮಾವೇಶದಲ್ಲಿ ಮಾತನಾಡಿದ ಅವರು ರಾಷ್ಟ್ರದ ರಕ್ಷಣೆ ಹಾಗೂ ಪೋಷಣೆ ಮಾಡಲು ಸೈನಿಕ ಮತ್ತು ಶಿಕ್ಷಕನಿಂದ ಮಾತ್ರ ಸಾಧ್ಯವಾದುದರಿಂದ ಪೋಷಕರು ಇಂತಹ ಶಿಕ್ಷಣ ನೀಡಿದ ಮಕ್ಕಳನ್ನು ದೇಶ ಸೇವಕರಾಗುವಂತೆ ಮಾಡಬೇಕು ಎಂದು ಪಾಲಕರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತ ಮಾಧವ, ಸಹಸಂಚಾಲಕರಾದ ಶ್ರೀ ರಮೇಶ್ ಎನ್, ಪ್ರೌಢಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ನಾರಾಯಣ ಪ್ರಭು, ಪ್ರೌಢಶಾಲಾ ಮುಖ್ಯಶಿಕ್ಷಕಿಯಾದ ಶ್ರೀಮತಿ ವಸಂತಿಕುಮಾರಿ, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶ್ರೀ ಜಿನ್ನಪ್ಪ ಸ್ವಾಗತಿಸಿ, ಶ್ರೀಮತಿ ಶಾಂಭವಿ ವಂದಿಸಿ, ಶ್ರೀಮತಿ ಸೌಮ್ಯ ಪಿ ನಿರೂಪಿಸಿದರು.

 Photo:

ಪ್ರೌಢಶಾಲಾ ವಿಭಾಗದ ಪೋಷಕರ ಸಭೆ

Leave a Reply