ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಶಿಶುಮಂದಿರದ ಪುಟಾಣಿಗಳಿಗೆ ನವರಾತ್ರಿಯ ವಿಜಯದಶಮಿ ದಿನದಂದು ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸರಸ್ವತಿ ಹೋಮದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮ ಪೂಜನೀಯ ಶ್ರೀಶ್ರೀ ಸಾಧ್ವಿ ಮಾತಾನಂದಮಯಿಯವರು ಶ್ರೀರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ನಡೆಯುವಂತಹ ೫ ಶಿಶುಮಂದಿರಗಳ ಒಟ್ಟು ೮೫ ಮಕ್ಕಳಿಗೆ ಮಗುವಿನ ಕೈಯಲ್ಲಿ ಅರಶಿನ ಕೊಂಬನ್ನು ಹಿಡಿದು ಹರಿವಾಣದಲ್ಲಿ ಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಸುವುದರ ಮೂಲಕ ಅಕ್ಷರಾಭ್ಯಾಸ ಮಾಡಿಸಿದರು. ಈ ಸಂಸ್ಥೆ ಸಂಸ್ಕಾರ ಸಂಸ್ಕೃತಿಯೊಂದಿಗೆ ಆಚರಣೆಗಳನ್ನು ಜೋಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಕಾರ‍್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎನ್ನುತ್ತಾ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿ ಆಶೀರ್ವಚನ ನೀಡಿದರು. ಕಾರ‍್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರು ಡಾ.ಪ್ರಭಾಕರ ಭಟ್, ಕಮಲಾ ಪ್ರಭಾಕರ ಭಟ್, ಅಧ್ಯಕ್ಷರು ನಾರಾಯಣ ಸೋಮಯಾಜಿ, ಕಾರ‍್ಯನಿರ್ವಹಣಾಧಿಕಾರಿ ವಸಂತ ಮಾಧವ ಹಾಗೂ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರರು, ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
February 2nd, 2016 at 10:00 PM
I WOULD LIKE TO GET ADMISSION FOR MY SON FOR 8TH STANDARD. DOB: 28.12.2002. PRESENTLY STUDYING IN ATOMIC ENERGY CENTRAL SCHOOL, KAIGA, UTTARA KANNADA DIST., KARNATAKA.
CONTACT NO. 9448405151 / 9448999768
umasbs@gmail.com