ಕದಿಕೆ ತುಳು ಸಂಘವನ್ನು ಶ್ರೀ ನರೇಶ್ ಕುಮಾರ್ ಸಸಿಹಿತ್ಲು ಉದ್ಘಾಟಿಸಿದರು. ಇವರು ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶ್ರೀರಾಮ ವಿದ್ಯಾಕೇಂದ್ರ ಬಹಳ ಮಹತ್ತರವಾದ ಪಾತ್ರವನ್ನು ವಹಿಸುತ್ತಿದೆ ಎಂದು ನುಡಿದರು.
ತುಳು ಸಂಘವು ತುಳು ಸಂಸ್ಕೃತಿ, ಆಚರಣೆ, ಸಂಪ್ರದಾಯಗಳನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ನಂತರ ಆಟಿ ತಿಂಗಳ ವಿಶೇಷತೆ, ತುಳು ಜನರ ಬದುಕಿನ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಬಟ್ ಕಲ್ಲಡ್ಕ ವಹಿಸಿದ್ದರು. ಇವರು ತುಳು ಸಂಘದ ಕಾರ್ಯ ವೈಖರಿಯ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಜೊತೆಗೆ ಹಳೆ ಕಾಲದಲ್ಲಿ ತುಳುವರು ಬಳಸುತ್ತಿದ್ದ ವಸ್ತುಗಳ ಪ್ರದರ್ಶಿಯನ್ನು ಏರ್ಪಡಿಸಲಾಗಿತ್ತು.
ವೇದಿಕೆಯಲ್ಲಿ ರೇಡಿಯೋ ನಿರೂಪಕರಾದ ಕೀರ್ತಿರಾಜ್, ಸಂಸ್ಥೆಯ ಸಂಚಾಲಕರಾದ ಶ್ರೀ ವಸಂತ ಮಾದವ, ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರ್ಕಟ್ಟೆ, ಸಂಘದ ನಿರ್ದೇಶಕಿ ಸುನೀತಾ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಹೇಮಲತಾ ಸ್ವಾಗತಿಸಿ, ಸಾಕ್ಷ್ಯ ವಂದಿಸಿ, ವರದರಾಜ್ ನಿರೂಪಿಸಿದರು.