ವಿದ್ಯಾರಂಭ
Thursday, October 22nd, 2015
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಶಿಶುಮಂದಿರದ ಪುಟಾಣಿಗಳಿಗೆ ನವರಾತ್ರಿಯ ವಿಜಯದಶಮಿ ದಿನದಂದು ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸರಸ್ವತಿ ಹೋಮದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮ ಪೂಜನೀಯ ಶ್ರೀಶ್ರೀ ಸಾಧ್ವಿ ಮಾತಾನಂದಮಯಿಯವರು ಶ್ರೀರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ನಡೆಯುವಂತಹ ೫ ಶಿಶುಮಂದಿರಗಳ ಒಟ್ಟು ೮೫ ಮಕ್ಕಳಿಗೆ ಮಗುವಿನ ಕೈಯಲ್ಲಿ ಅರಶಿನ ಕೊಂಬನ್ನು ಹಿಡಿದು ಹರಿವಾಣದಲ್ಲಿ ಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಸುವುದರ ಮೂಲಕ ಅಕ್ಷರಾಭ್ಯಾಸ ಮಾಡಿಸಿದರು. ಈ ಸಂಸ್ಥೆ ಸಂಸ್ಕಾರ ಸಂಸ್ಕೃತಿಯೊಂದಿಗೆ ಆಚರಣೆಗಳನ್ನು ಜೋಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ […]