ದಶಮಾನೋತ್ಸವದ ಉದ್ಘಾಟನೆ ಮತ್ತು ಪದವಿ ವಿದ್ಯಾರ್ಥಿಗಳ ಪ್ರವೇಶೋತ್ಸವ
Thursday, June 27th, 2019ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾದಾಗ ಒಪ್ಪಿಕೊಳ್ಳುವ ಮನೋಸ್ಥಿತಿ ನಿರ್ಮಾಣವಾಗಬೇಕು ಆಗ ಶಿಕ್ಷಣ ದೃಢವಾಗುತ್ತದೆ ಎಂದು ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ದಶಮಾನೋತ್ಸವ ಕಾರ್ಯಕ್ರಮ ಉದ್ಘ್ಘಾಟಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಇವರು ಮಾತನಾಡಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ೨೧೦ ಕಾಲೇಜುಗಳಲ್ಲಿ ರಾಷ್ಟ್ರಾಭಿಮಾನ, ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುವ ಶ್ರೀರಾಮ ಕಾಲೇಜಿಗೆ ವಿಶೇಷ ಸ್ಥಾನಮಾನ. ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬಲ್ಲ ಮಾನಸಿಕ ಶಾರೀರಿಕ, ಬೌದ್ಧಿಕ, ಸಾಮಾಜಿಕ ಆಧ್ಯಾತ್ಮಿಕ ೫ ಆಯಾಮಗಳ ಮೂಲಕವೇ ಇಲ್ಲಿ ಶಿಕ್ಷಣವನ್ನು ನೀಡುತ್ತಿರುವುದು ವಿಶೇಷ ಎಂದರು. […]