7ನೇ ತರಗತಿಯ ವಿದ್ಯಾರ್ಥಿಗಳ ದೀಪ ಪ್ರದಾನ

ದಿನಾಂಕ ೦೨/೦೩/೨೦೨೧ ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೨೦೧೯-೨೦ ನೇ ಸಾಲಿನ ವಿದ್ಯಾರ್ಥಿಗಳ ದೀಪ ಪ್ರದಾನ ಕಾರ್ಯಕ್ರಮ ನಡೆಸಲಾಯಿತು.
ಭಾರತ ಸನಾತನ ದೇಶ, ಈಗ ನಾಯಕನಾಗಿ ಭಾರತ ಎದ್ದು ನಿಂತಿದೆ, ಈ ಶಾಲೆಯಲ್ಲಿ ಕೇವಲ ವಿಷಯಗಳ ಶಿಕ್ಷಣ ನೀಡುತ್ತಿಲ್ಲ, ಜೊತೆಗೆ ತನ್ನ ಜೀವನ ಹೇಗಿರಬೇಕು ಎಂಬ ಬದುಕಿನ ಶಿಕ್ಷಣ ನೀಡುತ್ತಿದೆ. ಜೀವನದ ಮೌಲ್ಯಗಳನ್ನು ಅರಿತುಕೊಳ್ಳುವ ಶಿಕ್ಷಣ ಇಂದಿನ ಪೀಳಿಗೆಗೆ ದೊರಕಬೇಕು ಎಂಬ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್‍ಯನಿರ್ವಹಿಸುತ್ತಿದೆ. ತಾನು ಕಲಿತ ಮೌಲ್ಯವನ್ನು, ಸಂಸ್ಕಾರವನ್ನು ಪೌಢ ಶಿಕ್ಷಣಕ್ಕೆ ತೆರಳುತ್ತಿರುವ 7ನೇ ತರಗತಿಯ ವಿದ್ಯಾರ್ಥಿಗಳು ದೀಪವನ್ನು ಕಿರಿಯ ವಿದ್ಯಾರ್ಥಿಗಳಿಗೆ ಪ್ರಧಾನ ಮಾಡುವುದು ಈ ಕಾರ್ಯಕ್ರಮದ ಮೂಲ ಚಿಂತನೆ? ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು ಇದರ ಅದ್ಯಕ್ಷರಾದ ಡಾ|| ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.
ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ೭ನೇ ತರಗತಿಯ ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ, ಹಿರಿಯರಿಂದ ಆರ್ಶೀವಾದ ಪಡೆದುಕೊಂಡರು.
ಕಿರಿಯ ವಿದ್ಯಾರ್ಥಿಗಳು ಪೌಢ ಶಾಲೆಗೆ ಹೊರಟು ನಿಂತಿರುವ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಆಶೀರ್ವಾದ ಪಡೆದುಕೊಂಡರು. ನಂತರ ೭ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. 6ನೇ ತರಗತಿಯ ಆದಿಶ್ರೀ ರೈ ಪ್ರೇರಣಾ ಗೀತೆ ಹಾಡಿದಳು.

Leave a Reply