ಗಣರಾಜ್ಯೋತ್ಸವ ದಿನಾಚರಣೆ

ದಿನಾಂಕ 26.01.2015ನೇ ಸೋಮವಾರದಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಗಣರಾಜ್ಯೋತ್ಸವ ಕಾರ‍್ಯಕ್ರಮ ನೆರವೇರಿತು. ಕಾರ‍್ಯಕ್ರಮದಲ್ಲಿ ಶ್ರೀ ಗಣೇಶ್ ಬಂಟ್ವಾಳ ಉದ್ಯಮಿಗಳು ಧ್ವಜಾರೋಹಣಗೈದು ಶುಭಹಾರೈಸಿದರು. ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿಪೂರ್ವ, ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಘೋಷ್ ತಾಳಕ್ಕೆ ಸಾಮೂಹಿಕ ಯೋಗ ವ್ಯಾಯಾಮ ಪ್ರದರ್ಶನ ನಡೆಯಿತು.
ಕಾರ‍್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಡಾ| ಪ್ರಭಾಕರಭಟ್ ಕಲ್ಲಡ್ಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಸಂತಮಾಧವ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ರವಿರಾಜ ಕಣಂತೂರು ಉಪಸ್ಥಿತರಿದ್ದರು.

Leave a Reply