ಕಲ್ಲಡ್ಕ ಅ೩೦: ರಾಷ್ಟೀಯ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರಿಗೆ ಕಾರ್ಯಾಗಾರ
ಶ್ರೀರಾಮ ವಿದ್ಯಾಕೇಂದ್ರದ ಸಾಧನಾ ಸಭಾಭವನದಲ್ಲಿ ದಿನಾಂಕ 30.10.2021ರಂದು ರಾಷ್ಟ್ರೀಯ ಶಿಕ್ಷಣ ನೀತಿ 2020 ಇದರ ಬಗ್ಗೆ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ಅಂಕಣಕಾರರು ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಮಾತನಾಡುತ್ತಾ ಒಂದು ದೇಶವು ಉತ್ತಮ ರೀತಿಯಲ್ಲಿ ಅಭಿವೃದ್ದಿ ಹೊಂದಬೇಕಾದರೆ ಅಲ್ಲಿನ ಶಿಕ್ಷಣ ವ್ಯವಸ್ಥೆ ಉತ್ತಮವಾಗಿರಬೇಕು. ಹಾಗೂ ಎಲ್ಲರಿಗೂ ಅವರ ಆಸಕ್ತಿಗನುಗುಣವಾಗಿ ಶಿಕ್ಷಣ ದೊರೆಯಬೇಕು. ಎಂದು ಹೇಳುತ್ತಾ ನೂತನ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ನೀಡಿದರು. ನಂತರದ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿ ಅವರಲ್ಲಿದ್ದ ಸಂಶಯಗಳನ್ನು ದೂರ ಮಾಡಿದರು. ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್, ಹಿರಿಯರಾದ ಡಾ. ಕಮಲಾ ಪ್ರ.ಭಟ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾಕೇಂದ್ರದ ಎಲ್ಲಾ ವಿಭಾಗ ಮುಖ್ಯಸ್ಥರು, ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು. ಶ್ರೀ ತಿರುಮಲೇಶ್ ಪ್ರಶಾಂತ್ ಕಾರ್ಯಕ್ರಮವನ್ನು ನಿರ್ವಹಿಸಿದರು.