ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ 16.02.2021
ಮಂಗಳವಾರ ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರತಿ ಬೆಳಗಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ಘೃತಾ ಸಮರ್ಪಣೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದುಕೊಂಡರು. ಎಲ್ಲಾ ಗಣ್ಯರು ವಿದ್ಯಾರ್ಥಿಗಳಿಗೆ  ತಿಲಕವಿಟ್ಟು ಆಶೀರ್ವದಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್‍ಕಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್‍ಯಕ್ರಮದಲ್ಲಿ  ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿರುವ ರಾಜು ಮೊಗವೀರ ಮತ್ತು ಮಂಗಳೂರಿನಲ್ಲಿ ಉದ್ಯಮಿಗಳಾದ ಹರೀಶ ಪೂಜಾರಿ ಹಾಗೂ ಉಡುಪಿಯ ಅಪರಾಧ ತನಿಖಾ ದಳದ ಸಬ್‌ಇನ್ಸ್ಪೆಕ್ಟರ್ ಸುತೇಶ್ ಮತ್ತು ಬಾಳ್ತಿಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ  ಹಿರಣ್ಮಯಿ, ಹಿರಿಯರಾದ ಡಾ. ಕಮಲಾ ಪ್ರಭಾಕರ್ ಭಟ್ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತಮಾಧವ, ಸಹಸಂಚಾಲಕರಾದ ಶ್ರೀ ರಮೇಶ್ ಎನ್  ಉಪಸ್ಥಿತರಿದ್ದರು. 

 

Leave a Reply