65 ನೇ ಸ್ವಾತಂತ್ರ್ಯ ದಿನಾಚರಣೆ

65 ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವು ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಬಾಳ್ತಿಲ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಕ್ಸ್ಮಿ ಗೋಪಾಲಚಾರ್ಯ ಇವರು ಧ್ವಜಾರೋಹಣ ಮಾಡುವುದರೊಂದಿಗೆ ಪ್ರಾರಂಭವಾಯಿತು. ಧ್ವಜಾರೋಹಣ ಸಂದರ್ಭದಲ್ಲಿ ಶಿಶುಮಂದಿರ, ಪ್ರಾಥಮಿಕ, ಪ್ರೌಢ, ಹಾಗೂ ಕಾಲೇಜುಗಳ ಒಟ್ಟು 2500 ವಿದ್ಯಾರ್ಥಿಗಳು ಅಲ್ಲದೆ ಎಲ್ಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂಧಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು , ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಕಾಲೇಜಿನ ಪ್ರಾಂಶುಪಾಲರು ಮತ್ತು ಪುತ್ತೂರು ಜಿಲ್ಲಾ ಬೌದ್ಧಿಕ್ ಪ್ರಮುಖ್ ಶ್ರೀ ಸುರೇಶ ಪರ್ಕಳ ಉಪಸ್ಥಿತರಿದ್ದರು.  ಬಳಿಕ ಪ್ರಾಥಮಿಕ, ಪ್ರೌಢ, ಕಾಲೇಜು ವಿಭಾಗಗಳಲ್ಲಿ ಪ್ರತ್ಯೇಕ ಬೌದ್ಧಿಕ್ ಕಾರ್ಯಕ್ರಮ ಮತ್ತು ಭಾರತ ದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು .

Leave a Reply